86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಿತಿಗಳು ಪ್ರಕಟ

ಸೋಮವಾರ, 28 ನವೆಂಬರ್ 2022 (08:48 IST)
ಹಾವೇರಿ : ಜನವರಿ 6, 7 ಹಾಗೂ 8 ರಂದು ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವಿವಿಧ ಕೆಲಸ ಕಾರ್ಯಗಳಿಗೆ ರಚಿಸಲಾದ,

16 ಸಮಿತಿಗಳನ್ನು ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಅರಬೈಲ್ ಶಿವರಾಮ ಹೆಬ್ಬಾರ್ ಅವರು ಭಾನುವಾರ ಪ್ರಕಟಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ಜರುಗಿದ ಸ್ವಾಗತ ಸಮಿತಿಯ ಸಭೆಯಲ್ಲಿ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಶಸ್ವಿಗಾಗಿ ರಚಿಸಲಾದ ಸಮಿತಿಗಳ ಗೌರವಾಧ್ಯಕ್ಷರು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳ ಹೆಸರನ್ನು ಪ್ರಕಟಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ