ಕೋಮುಗಲಭೆ ಸೃಷ್ಟಿಸಲು ಶೋಭಾ ಕರಂದ್ಲಾಜೆ ಆರೋಪ: ದಿನೇಶ್ ಗುಂಡೂರಾವ್

ಶನಿವಾರ, 5 ನವೆಂಬರ್ 2016 (16:32 IST)
ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಸಚಿವ ರೋಷನ್ ಬೇಗ್ ಕೈವಾಡವಿದೆ ಎನ್ನುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ಕೋಮುಗಲಭೆ ಸೃಷ್ಟಿಸುವ ಹುನ್ನಾರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
 
ಇಂತಹ ಹೇಳಿಕೆಗಳು ಶೋಭಾಗೆ ಶೋಭೆ ತರಲ್ಲ. ಅವರು ತಮ್ಮ ಆರೋಪಗಳಿಗೆ ಪುಷ್ಠಿ ನೀಡುವಂತಹ ಸಾಕ್ಷ್ಯಗಳನ್ನು ಒದಗಿಸಬೇಕು. ಇಲ್ಲವಾದಲ್ಲಿ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
 
ಶಾಂತಿಯ ತಾಣವಾಗಿರುವ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಉದ್ದೇಶದಿಂದಲೇ ಸಚಿವ ಬೇಗ್ ಅವರ ಹೆಸರನ್ನು ಕರಂದ್ಲಾಜೆ ಬಳಸಿಕೊಂಡಿದ್ದಾರೆ. ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ರುದ್ರೇಶ್ ಹತ್ಯೆ ಪ್ರಕರಣದ ರೂವಾರಿಗಳಾದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದಾಗ್ಯೂ ಸಿಬಿಐಗೆ ವಹಿಸುವಂತೆ ಒತ್ತಾಯಿಸುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಸಿಬಿಐಗೆ ವಹಿಸುವುದಿಲ್ಲ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ