ಡಿಸಿಸಿ ಬ್ಯಾಂಕ್ ನ ಅಧಿಕಾರಕ್ಕಾಗಿ ಬಿಜೆಪಿ ಪಕ್ಷದ ನಾಯಕರಿಂದ ತೀವ್ರ ಪೈಪೋಟಿ

ಶನಿವಾರ, 22 ಫೆಬ್ರವರಿ 2020 (11:50 IST)
ಬೆಂಗಳೂರು : ಮಾರ್ಚ್ ನಲ್ಲಿ ಬೆಳಗಾವಿ ಜಿಲ್ಲೆಯ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಿನ್ನಲೆ ಅಧಿಕಾರಕ್ಕೇರಲು ಒಂದೇ ಪಕ್ಷದ ನಾಯಕರಿಂದ ತೀವ್ರ ಪೈಪೋಟಿ ನಡೆಯುತ್ತಿದೆ ಎಂಬುದಾಗಿ ತಿಳಿದುಬಂದಿದೆ.


ಡಿಸಿಎಂ ಲಕ್ಷ್ಮಣ್ ಸವದಿ, ಮಾಜಿ ಸಚಿವ ಉಮೇಶ್ ಕತ್ತಿ, ಜಲಸಂಪನ್ಮೂಲ ಸಚಿವ ರಮೇಶ್ ಮಧ್ಯೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಅಧಿಕಾರಕ್ಕಾಗಿ ನಾಯಕರು 3 ಗುಂಪುಗಳಾಗಿ ಹಗ್ಗಜಗ್ಗಾಟ ಶುರು ಮಾಡಿದ್ದಾರೆ.


ಮಹೇಶ್ ಕುಮಟಳ್ಳಿಗೆ ಅಧ್ಯಕ್ಷ ಸ್ಥಾನ ನೀಡುವಂತೆ  ಸಿಎಂ ಬಿಎಸ್ ವೈ ಬಳಿ ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.ಸದ್ಯ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾಗಿರುವ ರಮೇಶ್ ಕತ್ತಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ