ವಿಜಯ್ ಸಂಕೇಶ್ವರ್ ವಿರುದ್ಧ ಸೈಬರ್ ಕ್ರೈಂಗೆ ದೂರು

ಗುರುವಾರ, 16 ಮೇ 2019 (16:13 IST)
ವಿಜಯ್ ಸಂಕೇಶ್ವರ್ ವಿರುದ್ಧ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲಿಸಲು ಕಾಂಗ್ರೆಸ್ ಮುಖಂಡರು ಮುಂದಾಗಿದ್ದಾರೆ.

ಜವಾಹರಲಾಲ್ ನೆಹರು ಅವರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿಯಾಗಿ ಹೇಳಿಕೆಯನ್ನು ವಿಜಯ ಸಂಕೇಶ್ವರ್ ಪ್ರಕಟಿಸಿದ್ದಾರೆ ಎಂದು ಆರೋಪಿಸಿ  ಸಂಕೇಶ್ವರ್ ವಿರುದ್ಧ ಸೈಬರ್ ಕ್ರೈಮ್ ವಿಭಾಗಕ್ಕೆ ದೂರು ನೀಡುತ್ತೇವೆ ಎಂದು ಎಂಎಲ್ ಸಿ ಪ್ರಕಾಶ್ ರಾಥೋಡ್, ಬ್ರಿಜೇಶ್ ಕಾಳಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನೆಹರು ಬಾಬರ್ ವಂಶಸ್ಥರು ಎಂದು ವಿಜಯ ಸಂಕೇಶ್ವರ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರು ಬರೆದುಕೊಂಡಿದ್ದಾರೆ. ಇದರ ಬಗ್ಗೆ ಸೈಬರ್ ಕ್ರೈಂಗೆ ದೂರು ಸಲ್ಲಿಸುತ್ತೇವೆ ಎಂದ್ರು. ಇಂದಿರಾ, ರಾಜೀವ್ ಗಾಂಧಿ ಪ್ರಾಣತ್ಯಾಗ ಮಾಡಿ ದೇಶ ಉಳಿಸಿದ್ದಾರೆ. ಇಂತವರ ಮೇಲೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ವಿಜಯ ಸಂಕೇಶ್ವರ ಅಂತ ಪ್ರಕಾಶ್ ರಾಥೋಡ್ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಬಸನಗೌಡ ಪಾಟೀಲ್ ಬಿಜೆಪಿಯಿಂದ ಹೊರ ದೂಡಲ್ಪಟ್ಟವರು. ಯಡಿಯೂರಪ್ಪನವರ ಕಾಲು ಹಿಡಿದು ಬಿಜೆಪಿ ಸೇರಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿಯವರೇ ಅವರನ್ನು ಒಪ್ಪಿಕೊಂಡಿಲ್ಲ. ಅಪ್ಪು ಪಟ್ಟಣಶೆಟ್ಟಿ ಅವರ ವಿರುದ್ಧ ಗಲಾಟೆ ನಡೆಸುತ್ತಿದ್ದಾರೆ. ಮುಸ್ಲಿಂಮರು ತಮಗೆ ಮತ ಹಾಗುವುದು ಬೇಡ ಅಂತ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಆಯೋಗಕ್ಕೆ ದೂರ ನೀಡುತ್ತೇವೆ ಎಂದ್ರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ