ವಿಪತ್ತು ನಿರ್ವಹಣೆ ಕಾಯ್ದೆಯಡಿ ಸರ್ಕಾರದ ವಿರುದ್ಧ ದೂರು ದಾಖಲಿಸಬೇಕು-ಈಶ್ವರ್ ಖಂಡ್ರೆ

ಸೋಮವಾರ, 3 ಮೇ 2021 (11:26 IST)
ಮೈಸೂರು : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ಜನರ ಸಾವು ಕೇಸ್ ರಾಜ್ಯ ಸರ್ಕಾರದ ವಿರುದ್ಧ ಈಶ್ವರ್ ಖಂಡ್ರೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಪತ್ತು ನಿರ್ವಹಣೆ ಕಾಯ್ದೆಯಡಿ ಸರ್ಕಾರದ ವಿರುದ್ಧ ದೂರು ದಾಖಲಿಸಬೇಕು. ಸರ್ಕಾರದ ನಿರ್ಲಕ್ಷ್ಯದಿಂದಲೇ ಸಾವುಗಳು ಸಂಭವಿಸುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಸರ್ಕಾರ ಪ್ರತಿನಿತ್ಯ ಸಾವಿನ ತಪ್ಪು ಲೆಕ್ಕವನ್ನು ನೀಡುತ್ತಿದೆ. ರಾಜ್ಯ ಸರ್ಕಾರ ಗುಲಾಮಗಿರಿಯಲ್ಲಿದೆ. ಕೊವಿಡ್ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಳ್ತಿಲ್ಲ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ