ಬಿಜೆಪಿ ಪರಿವರ್ತನಾ ಯಾತ್ರೆಯ ಅವ್ಯವಸ್ಥೆಗೆ ಮಾಜಿ ಸಚಿವ ಆರ್.ಅಶೋಕ್ ಕಾರಣವೆಂದು ಬಿಜೆಪಿ ಮುಖಂಡರೇ ಹೈಕಮಾಂಡ್‌ಗೆ ದೂರು ನೀಡಿದ್ದಾರೆ.
ಬಿಜೆಪಿ ಪರಿವರ್ತನೆ ಯಾತ್ರೆಯಲ್ಲಿ ಎದುರಾದ ಹಲವು ದೋಷಗಳಿಗೆ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಆರ್.ಅಶೋಕ್ ನಡುವಿನ ಸಮನ್ವಯದ ಕೊರತೆ ಮೂಲ ಕಾರಣ ಎನ್ನಲಾಗುತ್ತಿದೆ. ಮತ್ತೊಂದೆಡೆ ಕರಂದ್ಲಾಜೆ ಸರ್ವಾಧಿಕಾರಿ ಧೋರಣೆಯಿಂದ ಯಾತ್ರಾ ಕಾರ್ಯಕ್ರಮ ವಿಫಲವಾಗಿದೆ ಎಂದು ಅಶೋಕ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿರಿಯ ನಾಯಕ ಬಿ.ಎಲ್.ಸಂತೋಷ್ ಅವರನ್ನು ಕಾರ್ಯಕ್ರಮದಿಂದ ದೂರವಿಟ್ಟಿರುವುದು ಕೂಡಾ ಕಾರ್ಯಕ್ರಮದ ಅವ್ಯವಸ್ಥೆಗೆ ಕಾರಣವೆಂದು ಹೇಳಲಾಗುತ್ತಿದೆ. ಆದರೆ, ಇದೀಗ ಅಶೋಕ್ ಅವರಿಗೆ ವಿಫಲತೆಯ ಹೊಣೆಪಟ್ಟಿ ಹೊರಿಸಿ ಹೈಕಮಾಂಡ್‌ಗೆ ದೂರು ನೀಡಲಾಗಿದೆ ಎನ್ನಲಾಗುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದಗೌಡ ಮತ್ತು ಬೆಂಗಳೂರಿನ ಶಾಸಕರು ಅಶೋಕ್ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.