ವಿ.ಎಸ್.ಉಗ್ರಪ್ಪ ವಿರುದ್ಧ ರಾಜ್ಯ ಉಸ್ತುವಾರಿಗೆ ದೂರು

ಗುರುವಾರ, 15 ಜೂನ್ 2017 (16:28 IST)
ಪೂರ್ವ ಸಿದ್ದತೆಯಿಲ್ಲದೇ ಅವಿಶ್ವಾಸ ನಿರ್ಣಯ ಮಂಡಿಸಿದ ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ವಿರುದ್ಧ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ಗೆ ದೂರು ನೀಡಲಾಗಿದೆ.
 
ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಮೊದಲು ಪೂರ್ವ ಸಿದ್ದತೆ ಮಾಡಿಕೊಳ್ಳಬೇಕಿತ್ತು ಎಂದು ಹಿರಿಯ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ತನ್ವೀರ್ ಸೇಠ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರಿಗೆ ದೂರು ನೀಡಿದ್ದಾರೆ.
 
ಅವಿಶ್ವಾಸ ನಿರ್ಣಯ ಸೋಲಿನಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ , ಸರಕಾರದ ಇಮೇಜ್‌ಗೆ ಅನಗತ್ಯವಾಗಿ ಧಕ್ಕೆ ಬಂದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಅವಿಶ್ವಾಸ ನಿರ್ಣಯ ಕುರಿತಂತೆ ಈಗಾಗಲೇ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ನಮಗೆ ಲಭ್ಯವಿರುವ ಮತಗಳು ನಮಗೆ ಬಂದಿದೆ. ಇದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಎನ್ನುವುದರಲ್ಲಿ ಅರ್ಥವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ