ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಆರ್ ಟಿಐ ಕಾರ್ಯಕರ್ತನಿಂದ ದೂರು ದಾಖಲು
ಸೋಮವಾರ, 28 ಜನವರಿ 2019 (11:39 IST)
ಬೆಂಗಳೂರು : ಅಸ್ಸಾಂನ ಗಣ್ಯವ್ಯಕ್ತಿಯೊಬ್ಬರಿಗೆ ಭಾರತ ರತ್ನ ಪ್ರಶಸ್ತಿ ನೀಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಅಸ್ಸಾಂನ ಖ್ಯಾತ ಗಾಯಕ ಭೂಪೇನ್ ಹಝಾರಿಕಾ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದನ್ನು ಪ್ರಶ್ನಿಸಿದ್ದರು. ಇದು ಅಸ್ಸಾಂ ಜನತೆಯ ಭಾವನೆಗಳಿಗೆ ದಕ್ಕೆ ತರುತ್ತಿದೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತ ರಾಜು ಮಹಾಂತ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ದೂರು ದಾಖಲಿಸಿದ್ದಾರೆ.
‘ಕವಿ, ಸಾಹಿತಿ, ಗಾಯಕ ಹಾಗೂ ಸಂಗಿತ ಸಂಯೋಜಕರಾಗಿರುವ ಹಜಾರಿಕರವರು ಕಲಾ ವಿಭಾಗಕ್ಕೆ ನೀಡಿದ ಕೊಡುಗೆ ಅಪಾರವಾದದ್ದು, ಅವರ ಬಗ್ಗೆ ಎಲ್ಲರಲ್ಲೂ ಹೆಮ್ಮೆಯಿದೆ. ಆದರೆ ಅವರನ್ನು ಕೇವಲವಾಗಿ ನೋಡಿದ ಮಲ್ಲಿಕಾರ್ಜುನ ಖರ್ಗೆ ಕೂಡಲೇ ಕ್ಷಮೆ ಕೇಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.