ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

Krishnaveni K

ಮಂಗಳವಾರ, 7 ಏಪ್ರಿಲ್ 2026 (16:55 IST)
ಬೆಂಗಳೂರು: ಅಸ್ಸಾಂ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಮತ್ತು ಆರ್ ಎಸ್ಎಸ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.

ಅಸ್ಸಾಂ ಚುನಾವಣೆ ಪ್ರಚಾರ ರಾಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ‘ನಮಾಜ್ ಮಾಡುವಾಗ ವಿಷ ಸರ್ಪ ಬಂದರೆ ನಮಾಜ್ ಅರ್ಧಕ್ಕೇ ಬಿಟ್ಟು ಅದನ್ನು ಕೊಲ್ಲಬಹುದು ಎಂದು ಕುರಾನ್ ಹೇಳುತ್ತದೆ. ಅದೇ ರೀತಿ ಬಿಜೆಪಿ ಮತ್ತು ಆರ್ ಎಸ್ಎಸ್ ವಿಷ ಸರ್ಪವಿದ್ದಂತೆ. ಇದನ್ನು ನೀವು ನಿರ್ನಾಮ ಮಾಡಬೇಕು’ ಎಂದು ಹೇಳಿಕೆ ನೀಡಿದ್ದರು.

ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಪರೋಕ್ಷವಾಗಿ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಮತ್ತು ಆರ್ ಎಸ್ಎಸ್ ನವರನ್ನು ಕೊಲ್ಲಬೇಕು ಎಂದು ಕರೆ ನೀಡಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ಬಗ್ಗೆ ಈಗ ಕರ್ನಾಟಕ ಬಿಜೆಪಿ ಘಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದೆ.

ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿದ್ದುಕೊಂಡು ಇಂತಹ ಪ್ರಚೋದನಕಾರೀ ಹೇಳಿಕೆ ನೀಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರ ಹೇಳಿಕೆಯಿಂದ ದೇಶದಾದ್ಯಂತ ಇರುವ ಲಕ್ಷಾಂತರ ಬಿಜೆಪಿ ಮತ್ತು ಆರ್ ಎಸ್ಎಸ್ ಕಾರ್ಯಕರ್ತರಿಗೆ ಪ್ರಾಣ ಬೆದರಿಕೆ ಹಾಕಿದಂತಾಗಿದೆ ಎಂದು ದೂರಿನಲ್ಲಿ ವಿವರಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ