ಬೆಂಗಳೂರು: 2013ರಿಂದ 2028ರ ವರೆಗೆ ಅಕ್ರಮವಾಗಿ 74.93 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳಿಸಿರುವ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ದೂರು ದಾಖಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ದಾಖಲೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.
ಇದೀಗ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ದಾಖಲೆ ಒದಗಿಸುವಂತೆ ನೊಟೀಸ್ ಜಾರಿ ಮಾಡಿದೆ. ಇದರಿಂದ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿರುವ ಡಿಕೆ ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.
ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆ ರದ್ದು ಮಾಡಿ ರಾಜ್ಯ ಸರ್ಕಾರ, ಲೋಕಾಯುಕ್ತ ತನಿಖೆಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್, ಕಳೆದ ಪ್ರೆಬ್ರವರಿ ತಿಂಗಳಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿತ್ತು.
ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ತಿ ಗಳಿಕೆ ವಿವರ ನೀಡುವಂತೆ ನೋಟಿಸ್ ಜಾರಿ ಮಾಡಿದ್ದು, ಸಿಬಿಐಗೆ ನೀಡಿರುವ ದಾಖಲಾತಿಗಳ ಮಾಹಿತಿಗಳನ್ನು ಒದಗಿಸುವಂತೆ ನೋಟಿಸ್ನಲ್ಲಿ ಸೂಚಿಸಿದೆ. ಇದೀಗ ಚುನಾವಣೆ ಹೊಸ್ತಿಲಲ್ಲಿ ಡಿಕೆಶಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.