ಮಹಿಳೆಯರ ಕಿಡ್ನ್ಯಾಪ್ ಪ್ರಕರಣ: ಎಚ್ ಡಿ ಕುಮಾರಸ್ವಾಮಿ ವಿರುದ್ಧವೂ ದೂರು

Krishnaveni K

ಶುಕ್ರವಾರ, 10 ಮೇ 2024 (10:04 IST)
ಬೆಂಗಳೂರು: ಮಹಿಳೆಯ ಅಪಹರಣ ಮಾಡಿ ಬೆದರಿಕೆ ಹಾಕಿದ ಆರೋಪದಲ್ಲಿ ಒಂದೆಡೆ ಎಚ್ ಡಿ ರೇವಣ್ಣ ಬಂಧಿತರಾಗಿದ್ದರೆ ಇತ್ತ ಸಹೋದರ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೂ ಸಂಕಷ್ಟ ಎದುರಾಗಿದೆ.

ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದೆ. ಇದೀಗ ಕುಮಾರಸ್ವಾಮಿಗೆ ಮುಳುವಾಗುವ ಸಾಧ‍್ಯತೆಯಿದೆ. ಕುಮಾರಸ್ವಾಮಿ ಸಂತ್ರಸ್ತೆಯ ಸ್ಥಳ ಮಾಹಿತಿ ಬಹಿರಂಗಪಡಿಸಿದ್ದಾರೆ ಮತ್ತು ಆರೋಪಿಗೆ ನೆರವಾಗುತ್ತಿದ್ದಾರೆ ಎಂದು ಕಾಂಗ್ರೆಸ್ ದೂರು ನೀಡಿದೆ.

ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ಟೀಂ ರಚನೆ ಮಾಡಿದೆ. ಎಸ್ಐಟಿ ತಂಡ ತನಿಖೆ ನಡೆಸುತ್ತಿದೆ. ಇದರ ನಡುವೆ ಕುಮಾರಸ್ವಾಮಿ ಸಂತ್ರಸ್ತೆಯ ಸ್ಥಳವನ್ನು ಬಹಿರಂಗಪಡಿಸಿದ್ದಾರೆ ಮತ್ತು ಈ ಮೂಲಕ ಪರೋಕ್ಷವಾಗಿ ಆರೋಪಿಗಳಿಗೆ ನೆರವಾಗುತ್ತಿದ್ದಾರೆ ಎಂದು ದೂರಲಾಗಿದೆ.

ಇದರಿಂದಾಗಿಯೇ ಸಂತ್ರಸ್ತ ಮಹಿಳೆಯರು ದೂರು ನೀಡಲು ಹಿಂದೇಟು ಹಾಕುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ವಿವರಗಳು ಕುಮಾರಸ್ವಾಮಿಯ ಬಳಿಯಿದೆ. ಹೀಗಾಗಿ ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ಕಾಂಗ್ರೆಸ್ ದೂರಿನಲ್ಲಿ ಹೇಳಿದೆ. ಈ ಪ್ರಕರಣವೀಗ ಕುಮಾರಸ್ವಾಮಿಗೆ ಸಂಕಷ್ಟ ತಂದೊಡ್ಡಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ