ಸದ್ಗುರು ವಿರುದ್ಧ ಅರಣ್ಯಾಧಿಕಾರಿಗೆ ದೂರು?

ಭಾನುವಾರ, 16 ಅಕ್ಟೋಬರ್ 2022 (09:52 IST)
ಚಿಕ್ಕಬಳ್ಳಾಪುರ : ಜೀವಂತ ಹಾವು ಕೈಯಲ್ಲಿ ಹಿಡಿದು ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ಇಶಾ ಫೌಂಡೇಶನ್ ಸಂಸ್ಥಾಪಕ ಜಗ್ಗಿ ವಾಸುದೇವ್ ವಿರುದ್ಧ ಅರಣ್ಯಾಧಿಕಾರಿಗೆ ದೂರು ನೀಡಲಾಗಿದೆ.

ಇತ್ತೀಚೆಗೆ ನಡೆದ ನಾಗಮಂಟಪ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಜಗ್ಗಿ ವಾಸುದೇವ್ ಅವರು ಜೀವಂತ ಹಾವನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದರು.

ಈ ಚಿತ್ರ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಎಸ್ಪಿಸಿಎ ಸಂಸ್ಥೆ ಸದಸ್ಯ ಹಾಗೂ ಉರಗರಕ್ಷಕ ಪೃಥ್ವಿರಾಜ್ ಚಿಕ್ಕಬಳ್ಳಾಪುರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಅವರಿಗೆ ದೂರು ನೀಡಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ