ಹಿಂದೂಗಳ ಭಾವನೆಗೆ ಧಕ್ಕೆ ; ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲು

ಮಂಗಳವಾರ, 28 ಆಗಸ್ಟ್ 2018 (11:33 IST)
ಬೆಂಗಳೂರು : ಬಹುಭಾಷಾ ನಟ ಪ್ರಕಾಶ್ ರೈ  ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ ಕಾರಣ ಅವರ ವಿರುದ್ಧ ವಕೀಲರೊಬ್ಬರು ನ್ಯಾಯಾಲಯದಲ್ಲಿ ದೂರು ನೀಡಿದ್ದಾರೆ.


ನಟ ಪ್ರಕಾಶ್ ರೈ ಖಾಸಗಿ ಕಾರ್ಯಕ್ರಮವೊಂದರಲ್ಲಿ ಗೋವುಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಅಷ್ಟೇ ಅಲ್ಲದೇ ತುಂಬ ಕಡೆಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ. ಮುಂದೆಂದೂ ಅದು ಮರುಕಳಿಸಬಾರದು. ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ವಕೀಲ ಎನ್.ಕಿರಣ್ ಎಂಬುವರು ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ದೂರು ನೀಡಿದ್ದಾರೆ.


ಈ ಪ್ರಕರಣಕ್ಕೆ  ಸಂಬಂಧಪಟ್ಟ ವಿಚಾರಣೆಯನ್ನು  ನ್ಯಾಯಾಲಯ ಕೈಗೆತ್ತಿಕೊಂಡಿದೆ. ತತ್ಸಬಂಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ