ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

Sampriya

ಭಾನುವಾರ, 20 ಜುಲೈ 2025 (15:31 IST)
Photo Credit X
ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಯಾಗಿ ಬಾಗಿನ ಅರ್ಪಿಸಿದರು. 

ಕಬಿನಿ ಮುಂಗಾರಿನಲ್ಲಿ ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಕಳೆದ ಜೂನ್ ಮೊದಲ ವಾರದಲ್ಲೇ ತುಂಬಿತ್ತು. ಅಣೆಕಟ್ಟೆಯ ಗರಿಷ್ಠ ಮಟ್ಟ 2,284 ಅಡಿ ಇದ್ದು, ಇಂದಿನ ಮಟ್ಟ 2,283.33 ಅಡಿ ಇತ್ತು. 15 ಸಾವಿರ ಕ್ಯೂಸೆಕ್ ಒಳಹರಿವಿತ್ತು.

ಬಾಗಿನ ಸಮರ್ಪಿಸಿ ನಾಡಿನ ಒಳಿತಿಗಾಗಿ ಹಿರಿಯ ನಾಯಕರು ಪ್ರಾರ್ಥನೆ ಸಲ್ಲಿಸಿದರು. ಸಚಿವ ಡಾ.ಹೆಚ್.ಸಿ ಮಹದೇವಪ್ಪ, ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಕಾಂಗ್ರೆಸ್‌ನ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಮೈಸೂರಿನ ಹೆಗ್ಗಡದೇವನಕೋಟೆ ಬಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದೆ. ಪ್ರತಿ ಬಾರಿಯು ಸಮೃದ್ಧ ಮಳೆಯಾಗಿ ಕಾವೇರಿ ನದಿ ಮೈದುಂಬಿ ಹರಿಯಲಿ, ಜಲಾಶಯಗಳ‌ ಒಡಲು ತುಂಬಿ ರೈತರು ಬಾಳ ಹಸನಾಗಲಿ‌ ಎಂದು ಪ್ರಾರ್ಥಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು. 

ಕಪಿಲಾ ನದಿಯು ಕಾವೇರಿಯ ಪ್ರಮುಖ ಉಪನದಿಯಾಗಿದ್ದು, 1.13 ಲಕ್ಷ ಹೆಕ್ಟೇರ್ ಭೂಮಿಗೆ ನೀರಾವರಿ ಒದಗಿಸುತ್ತದೆ. ಪ್ರತಿ ವರ್ಷದಂತೆ ಜಲಾಶಯ ತುಂಬಿದಾಗ ಬಾಗಿನ ಅರ್ಪಿಸಲಾಗಿದ್ದು, ರೈತರಿಗೆ ಒಳ್ಳೆಯದಾಗಲೆಂದು ಕಪಿಲಾ ಮಾತೆಗೆ ಪ್ರಾರ್ಥಿಸಲಾಗಿದೆ‌. ಜಲಾಶಯದ ಎದುರು ಬೃಂದಾವನ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ