ಹೋಳಿ ಹಬ್ಬದಂದು ಘರ್ಷಣೆ: ಐವರು ಅರೆಸ್ಟ್

ಶುಕ್ರವಾರ, 22 ಮಾರ್ಚ್ 2019 (15:29 IST)
ಹೋಳಿ ಧುಲಂಡಿ ಆಚರಣೆ ಸಂದರ್ಭ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಕಲಬುರಗಿ ನಗರದ ಎಂ.ಎಸ್.ಕೆ. ಮಿಲ್ ಬಡಾವಣೆ ವ್ಯಾಪ್ತಿಯ ಗಾಲಿಬ್ ಕಾಲೋನಿಯಲ್ಲಿ ಈ ಘಟನೆ ನಡೆದಿತ್ತು. ಹೋಳಿ ಹಬ್ಬದ ಅಂಗವಾಗಿ ಬಣ್ಣ ಎರಚಲು ಮುಂದಾದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು.

ಘಟನೆಯಲ್ಲಿ ಒಬ್ಬ ಯುವಕ ಗಾಯಗೊಂಡಿದ್ದನು. ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಲಾಟೆ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಎರಡು ಬೈಕ್ ಗಳಿಗೂ ಬೆಂಕಿ ಇಡಲಾಗಿತ್ತು.

ಘಟನೆಯ ಹಿನ್ನೆಲೆಯಲ್ಲಿ ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ