ಮಹಾ ನಗರಪಾಲಿಕೆ ಸಭೆಯಲ್ಲಿ ಗಲಾಟೆಯೋ ಗಲಾಟೆ!

ಬುಧವಾರ, 26 ಡಿಸೆಂಬರ್ 2018 (19:40 IST)
ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ಮಹಾನಗರ ಪಾಲಿಕೆ ಸದಸ್ಯರು ಪಟ್ಟು ಹಿಡಿದಿದ್ದರಿಂದಾಗಿ ಪಾಲಿಕೆ ಸಭೆಯಲ್ಲಿ ಭಾರೀ ಗದ್ದಲದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ.

ಮಂಗಳೂರು ಮಹಾನಗರಪಾಲಿಕೆ ಚುನಾವಣೆ ಶೀಘ್ರ ಬರಲಿರುವುದರಿಂದ ಅಭಿವೃದ್ದಿ ಬಗ್ಗೆ ಚರ್ಚೆ ನಡೆಯಬೇಕೆಂಬ ಸದಸ್ಯರ ಪಟ್ಟು  ಪಾಲಿಕೆ ಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು.

ಸಿಪಿಎಂ ಸದಸ್ಯ ದಯಾನಂದ ಶೆಟ್ಟಿ ಪ್ರಸ್ತಾಪಿಸಿದ ಈ ವಿಚಾರಕ್ಕೆ ಬಿಜೆಪಿ ಸದಸ್ಯರು ಬೆಂಬಲಿಸಿ ಪಾಲಿಕೆಯ ಈ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ  ಮನಪಾ ಸಚೇತಕ ಶಶಿಧರ್ ಹೆಗ್ಡೆ, ಐದು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದು ಹೇಳಿದ್ದು,  ಬಿಜೆಪಿ ಸದಸ್ಯರ ಆಕ್ರೋಶಕ್ಕೆ ಕಾರಣವಾಯಿತು. ಈ ಸಂದರ್ಭದಲ್ಲಿ  ಮೇಯರ್ ಅದಕ್ಕೆ ಪೂರಕವಾಗಿ ಮಾತನಾಡಿದಾಗ ಕೆರಳಿದ ಬಿಜೆಪಿ ಸದಸ್ಯರು,  ಸಚೇತಕ ಶಶಿಧರ್ ಹೆಗ್ಡೆ ಮೈಕ್ ಎಳೆದು ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದರು. ಆಗ ಬಿಜೆಪಿ ಎಲ್ಲಾ ಸದಸ್ಯರು ಮೇಯರ್  ಗೆ ಮುತ್ತಿಗೆ ಹಾಕಿದರು. ಈ ವೇಳೆ ಮೇಯರ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ