ಒಂದು ವಾರದ ಹಿಂದೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅಭಿನವ್ ಖರೆ ವರ್ಗಾವಣೆಯಾಗಿದ್ದ ಕಾರಣ ಜಿಲ್ಲೆಯಲ್ಲಿ ಕೆಲಸ ಮಾಡಲು ಮಹಿಳಾ ಅಧಿಕಾರಿ ಶತಪ್ರಯತ್ನ ಮಾಡುತ್ತಿದ್ದಾರೆ.
ಆದರೆ ಜಿಲ್ಲೆಗೆ ಪುರುಷ ಎಸ್ ಪಿ ಬೇಕೆಂದು ಸಚಿವ ಡಾ.ಸುಧಾಕರ್ ಬೇಡಿಕೆ ಇಡುತ್ತಿದ್ದಾರೆ. ಇದರಿಂದ ಈ ವಿಚಾರದಲ್ಲಿ ಗೊಂದಲ ಏರ್ಪಟ್ಟ ಹಿನ್ನಲೆಯಲ್ಲಿ ಸರ್ಕಾರ ಎಸ್ ಪಿ ನೇಮಕ ವಿಳಂಬ ಮಾಡುತ್ತಿದೆ ಎನ್ನಲಾಗಿದೆ.