ಕಾಂಗ್ರೆಸ್ ಶಾಸಕರಿಂದಲೇ ನೂತನ ಸಿಎಂ ಆಯ್ಕೆ: ಸಿಎಂ ಸ್ಪಷ್ಟನೆ

ಶುಕ್ರವಾರ, 13 ಅಕ್ಟೋಬರ್ 2017 (14:55 IST)
ಮುಂದಿನ ವಿಧಾನಸಭಾ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ. ಆದರೆ, ಹೊಸದಾಗಿ ಆಯ್ಕೆಯಾದ ಶಾಸಕರು ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  
ಮುಂಬರುವ ವಿಧಾನಸಭೆ ಚುನಾವಣೆ ಸಿದ್ದತೆ ಕುರಿತಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಲು ನವದೆಹಲಿಗೆ ಆಗಮಿಸಿರುವ ಸಿಎಂ, ಚುನಾವಣೆಯಲ್ಲಿ ಯಾರು ಪಕ್ಷದ ನೇತೃತ್ವ ವಹಿಸಿಕೊಳ್ಳುತ್ತಾರೆ ಎನ್ನುವ ಬಗ್ಗೆ ಅನುಮಾನ ಬೇಡ. ಶಾಸಕಾಂಗ ಪಕ್ಷದ ನಾಯಕರೇ ಸದಾ ಚುನಾವಣೆ ನೇತೃತ್ವವಹಿಸುತ್ತಾರೆ ಎಂದರು. 
 
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರೊಂದಿಗೆ ಭಿನ್ನಾಭಿಪ್ರಾಯವಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲು ಒಂದಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. 
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಬಹುಮತ ಬರುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಕಳೆದ 2013ರಲ್ಲಿ ಗೆದ್ದ ಸೀಟುಗಳಿಗಿಂತ ಹೆಚ್ಚಿನ ಸೀಟುಗಳಲ್ಲಿ ಜಯಗಳಿಸುತ್ತೇವೆ ಎಂದರು.
 
 ಭ್ರಷ್ಟಾಚಾರದ ಮುಕ್ತ ಆಡಳಿತವನ್ನು ನೀಡಿದ್ದೇವೆ. ಬಿಜೆಪಿಯವರು ಹತಾಶೆಯಿಂದಾಗಿ ಕಾಂಗ್ರೆಸ್ ವಿರುದ್ಧ ಆಧಾರವಿಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ