ಕಾಂಗ್ರೆಸ್ ಪಕ್ಷ ಯಾವತ್ತೂ ಪತ್ರಕರ್ತರ ಪರವಾಗಿದೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಪತ್ರಕರ್ತರು ಸ್ವತಂತ್ರವಾಗಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಬೇಕು ಎನ್ನುವ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷ ನಿರಂತರ ಹೋರಾಟ ಮಾಡಿದೆ ಎಂದು ತಿಳಿಸಿದ್ದಾರೆ.
ಕಿಮ್ಮನೆ ರತ್ನಾಕರ್ ನೇತೃತ್ವದ ಹಕ್ಕು ಭಾಧ್ಯತಾ ಸಮಿತಿ ಶಿಫಾರಸ್ಸಿನಂತೆ ವಿಧಾನಸಭೆಯಲ್ಲಿ ಗೊತ್ತುವಳಿಯನ್ನು ಅಂಗೀಕರಿಸಲಾಗಿತ್ತು.
ಶಾಸಕರ ತೇಜೋವಧೆಯಾಗುವಂತಹ ಲೇಖನ ಪ್ರಕಟಿಸಿದ್ದಕ್ಕಾಗಿ ಹಾಯ್ ಬೆಂಗಳೂರು ಸಂಪಾದಕ ರವಿ ಭೆಳಗೆರೆ ಮತ್ತು ಯಲಹಂಕಾ ವಾಯ್ಸ್ ಸಂಪಾದಕ ಅನಿಲ್ ರಾಜ್ ವಿರುದ್ಧ ಒಂದು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸುವಂತೆ ಸ್ಪೀಕರ್ ಹೊರಡಿಸಿದ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.