ರಾಜ್ಯದ ಜನತೆ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಕಾಂಗ್ರೆಸ್ ಬಿಜೆಪಿ ವಿಫಲ: ಕುಮಾರಸ್ವಾಮಿ

ಶುಕ್ರವಾರ, 8 ಸೆಪ್ಟಂಬರ್ 2017 (15:25 IST)
ರಾಜ್ಯದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಸರಕಾರವಾಗಲಿ ಅಥವಾ ಬಿಜೆಪಿಯಾಗಲಿ ವಿಫಲವಾಗಿವೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲ ಕಾಡುತ್ತಿದೆ. ಆದಾಗ್ಯೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಯಾವುದೇ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಸಿದ್ದವಾಗಿಲ್ಲ. ವಿಪಕ್ಷವಾದ ಬಿಜೆಪಿ ಕೂಡಾ ಆರೋಪ, ಪ್ರತ್ಯಾರೋಪ ಮಾಡುವುದರಲ್ಲಿ ನಿರತವಾಗಿದೆ ಎಂದು ಕಿಡಿಕಾರಿದರು.
 
ಬಿಜೆಪಿ ನಾಯಕರು ಮಂಗಳೂರು ಚಲೋ ಕಾರ್ಯಕ್ರಮಕ್ಕೆ ಆಸಕ್ತಿ ತೋರಿದಷ್ಟು ರಾಜ್ಯದ ರೈತರ ಬಗ್ಗೆ ತೋರಿಸುತ್ತಿಲ್ಲ. ಕೋಮುಭಾವನೆಗಳನ್ನು ಕೆರಳಿಸಿ ಮತ ಪಡೆಯುವ ಹುನ್ನಾರದಲ್ಲಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ 24 ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಲ್ಲದೇ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ