ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದ ರೆಡ್ಡಿ
ಶುಕ್ರವಾರ, 9 ಫೆಬ್ರವರಿ 2018 (08:35 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಜನಾರ್ದನರೆಡ್ಡಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಂದಸಿಂಗ್ ಅವರಿಗಿಂತ ಸಂಸದ ಶ್ರೀರಾಮುಲು ಅವರಿಗೆ ಮೂರು ಆನೆಗಳ ಬಲವಿದ್ದು, ಜನ ಬೆಂಬಲವೂ ಇದೆ. ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣೆಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.