ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್​​ ದೂರು

ಗುರುವಾರ, 27 ಏಪ್ರಿಲ್ 2023 (19:10 IST)
congress
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ದಂಗೆ, ಗಲಭೆಗಳು ಏಳಬಹುದು ಎಂದು ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಇನ್ನು ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆಯುವಂತೆ ಆಮಿಷವೊಡ್ಡಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ವಿರುದ್ಧವೂ ಸಹ ಕಾಂಗ್ರೆಸ್​ ದೂರು ನೀಡಿದೆ. ಬಿಜೆಪಿ ಪರ ಮತ ಹಾಕುವಂತೆ ಬಿಜೆಪಿ ನಾಯಕರು ಮತದಾರರನ್ನು ಬೆದರಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ವಿರೋಧ ಪಕ್ಷವಾದ ಕಾಂಗ್ರೆಸ್‌ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರಕ್ರಿಯಿಸಿದ ಡಿ.ಕೆ.ಶಿವಕುಮಾರ್, ಕರ್ನಾಟಕ ಶಾಂತಿಯ ತೋಟ. ಇದು ಕರ್ನಾಟಕ ರಾಜ್ಯದ ಪದ್ಧತಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು‌ಗಲಭೆ ಆಗುತ್ತೆ ಎಂದು ಅಮಿತ್ ಶಾ ಹೇಳಿದ್ದಾರೆ. ಕಾಂಗ್ರೆಸ್​​​ಗೆ ವೋಟ್ ಮಾಡಬೇಡಿ ಎಂದು ಹೇಳುವ ಮೂಲಕ ಮತದಾರರನ್ನು ಹೆದರಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿದ್ದೇವೆ. ಏಪ್ರಿಲ್ 25 ಈ ಹೇಳಿಕೆಯನ್ನು ನೀಡಿದ್ದು, ಎಫ್ಐಆರ್ ದಾಖಲಿಸಿ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಹಾಗೇ ಅವರನ್ನು ಪ್ರಚಾರಕ್ಕೆ ಬರದಂತೆ ಚುನಾವಣಾ ಆಯೋಗ ಚುನಾವಣಾ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿದರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ