ಡಿಕೆಶಿ ಪರ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್`ಗಳ ಲಾಬಿ

ಗುರುವಾರ, 4 ಮೇ 2017 (17:52 IST)
ಕಾಂಗ್ರೆಸ್`ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ತೀವ್ರಗೊಂಡಿದೆ. ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್ ನಡುವೆ ಪೈಪೋಟಿ ತೀವ್ರಗೊಂಡಿದ್ದು, ಇದೀಗ, ಡಿ.ಕೆ. ಶಿವಕುಮಾರ್ ಪರ ಬೆಂಗಳೂರಿನ ಕಾಂಗ್ರೆಸ್ ಕಾರ್ಪೊರೇಟರ್`ಗಳು ಸಹ ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

30 ಕಾರ್ಪೋರೇಟರ್ ಅವರನ್ನೊಳಗೊಂಡ ಕಾಂಗ್ರೆಸ್ ನಿಯೋಗ, ಮೇಯರ್ ಪದ್ಮಾವತಿ ನೇತ್ಋತ್ವದಲ್ಲಿ ದೆಹಲಿಗೆ ತೆರಳಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಿ. ವೇಣುಗೋಪಾಲ್ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೇ ಕೆಪಿಸಿಸಿ ಅಧ್ಯಕ್ಷಗಾದಿ ನೀಡಬೇಕೆಂದು ಕಾರ್ಪೊರೇಟರ್`ಗಳು ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ, ಬೆಳಗ್ಗೆ  ಬೆಂಗಳೂರಲ್ಲಿ ಪ್ರತಿಕ್ರಿಯಿಸಿರುವ ಸಚಿವ ಡಿ.ಕೆ. ಶಿವಕುಮಾರ್, ನಾನು ಕೆಪಿಸಿಸಿ ಹುದ್ದೆಯ ಆಕಾಂಕ್ಷಿಯಲ್ಲ. ಪಕ್ಷ ಜವಾಬ್ದಾರಿ ನೀಡಿದರೆ ನಿರ್ವಹಿಸುತ್ತೇನೆ. ಪಕ್ಷ ಈ ಹಿಂದೆ ನೀಡಿದ ಎಲ್ಲ ಜವಾಬ್ದಾರಿಯನ್ನ ಸಮರ್ಪಕವಾಗಿ ನಿರ್ವಹಿಸಿದ್ದೇನೆ ಎನ್ನುವ ಮೂಲಕ ಪರೋಕ್ಷವಾಗಿ ಕೆಪಿಸಿಸಿ ಹುದ್ದೆಯ ಆಕಾಂಕ್ಷಿ ಎಂದು ಸ್ಪಷ್ಟಪಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ