ಇಂದು ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಸೈಕಲ್ ಜಾಥಾ; ಸರ್ಕಾರದ ವಿರುದ್ಧ 'ಕೈ' ನಾಯಕರ ಆಕ್ರೋಶ

ಸೋಮವಾರ, 20 ಸೆಪ್ಟಂಬರ್ 2021 (12:03 IST)
ಬೆಂಗಳೂರು : ವಿಧಾನಮಂಡಲ ಅಧಿವೇಶನದ ಮೊದಲ ದಿನವೇ ಏಲೆ ಏರಿಕೆ ವಿರುದ್ಧ ಕಿಡಿಕಾರಿದ್ದ ವಿಪಕ್ಷ ಕಾಂಗ್ರೆಸ್ ನಾಯಕರು, ಎತ್ತಿನ ಗಾಡಿಯಲ್ಲಿ ಅಧಿವೇಶನಕ್ಕೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಇಂದು ಸೈಕಲ್ ಜಾಥಾ ಮೂಲಕ ವಿಧಾನಸೌಧಕ್ಕೆ ತೆರಳುತ್ತಿದ್ದಾರೆ.

ವಿಧಾನಸಭೆಯಲ್ಲಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಬೆಲೆ ಏರಿಕೆ ಕುರಿತು ಉತ್ತರ ನೀಡಲಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ಕಾಂಗ್ರೆಸ್ ಸಜ್ಜಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ ನಡೆಸಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೂ ಕಾಂಗ್ರೆಸ್ ನಾಯಕರು ಸೈಕಲ್ ಜಾಥಾ ನಡೆಸುತ್ತಿದ್ದಾರೆ.
ಬೆಲೆ ಏರಿಕೆ ಜೊತೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಖಂಡಿಸಿ ಹೋರಾಟ ನಡೆಸುತ್ತಿರುವುದಾಗಿ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ