ಸೇನೆ ವಿರುದ್ಧ ಘೋಷಣೆ ಕೂಗಿದ್ದನ್ನು ಕಾಂಗ್ರೆಸ್ ಸಮರ್ಥಿಸಿಕೊಳ್ಳುತ್ತಿದೆ: ಬಿಎಸ್‌ವೈ

ಸೋಮವಾರ, 22 ಆಗಸ್ಟ್ 2016 (12:10 IST)
ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿರುವುದನ್ನು ಕಾಂಗ್ರೆಸ್ ಸಮರ್ಥಿಸಿಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಅಮ್ನೆಸ್ಟಿ ಸಂಸ್ಥೆಯ ಪರವಾಗಿ ಹೇಳಿಕೆ ನೀಡುತ್ತಿದ್ದಾರೆ. ದೇಶದ್ರೋಹ ಘೋಷಣೆ ಕೂಗಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುವ ಮೂಲಕ ದೌರ್ಜನ್ಯ ಎಸಗಿದ್ದಾರೆ. ದೌರ್ಜನ್ಯದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ತಿಳಿಸಿದರು.
 
ಸೇನೆಯ ವಿರುದ್ಧ ಘೋಷಣೆ ಕೂಗಿರುವುದನ್ನು ಖಂಡಿಸಿ ರಾಜ್ಯಭವನಕ್ಕೆ ತೆರಳಿ ರಾಜ್ಯಪಾಲರಾದ ವಜೂಬಾಯಿ ವಾಲಾ ಅವರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದರು.
 
ಪ್ರಕರಣ ಕುರಿತು ಕಾಂಗ್ರೆಸ್ ನಾಯಕರು ಚಿಂತನೆ ಮಾಡಿ ಹೇಳಿಕೆ ನೀಡಬೇಕು. ಇಲ್ಲವಾದರೇ ಅದರ ಪರಿಣಾಮವನ್ನು ಎದುರಿಸಬೇಕಾತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪನವರು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಗರಂ ಆದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ