ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗ ದೂರು
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ನಿಯೋಗದಿಂದ ಬೆಂಗಳೂರಿನಲ್ಲಿ ದೂರು ಸಲ್ಲಿಸಿದೆ.
ಬಿಜೆಪಿಯ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಿದ ಕೈ ಪಡೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಯನ್ನ ಅಸ್ತ್ರ ಮಾಡಿಕೊಂಡಿದೆ. `ಪ್ರತಿಯೊಬ್ಬ ಮತದಾರನಿಗೆ 6 ಸಾವಿರ ನೀಡಿ ಮತ ಕೇಳಲಾಗುವುದು ಎಂದಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ.