ರಾಹುಲ್ ಗಾಂಧಿಯಿಂದ ಕಾಂಗ್ರೆಸ್‌ಗೆ ಹೊಸ ಚೈತನ್ಯ ಬಂದಿಲ್ಲ– ರಾಜೀವ್ ಚಂದ್ರಶೇಖರ್

ಭಾನುವಾರ, 24 ಡಿಸೆಂಬರ್ 2017 (20:59 IST)
ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದರಿಂದ ಕಾಂಗ್ರೆಸ್ ಗೆ ಹೊಸ ಚೈತನ್ಯ ಬಂದಿಲ್ಲ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. 
 
ರಾಹುಲ್ ಗಾಂಧಿ ಅವರ ವರ್ಚಸ್ಸು ಕರ್ನಾಟಕ ಚುನಾವಣೆಯಲ್ಲಿ ಪ್ರಯೋಜವಾಗುವುದಿಲ್ಲ. ಗುಜರಾತ್ ನಲ್ಲಿ ಸೋಲನುಭವಿಸಿದಂತೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಸೋಲು ಕಾಣಲಿದೆ ಎಂದು ತಿಳಿಸಿದ್ದಾರೆ.
 
ಗುಜರಾತ್ ನ ಫಲಿತಾಂಶ ಬಿಜೆಪಿಗೆ ಎಚ್ಚರಿಕೆಯ ಗಂಟೆ, ಹೊಸ ಸರ್ಕಾರ ಇದನ್ನು ಸರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ