ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮ ಆಚರಿಸಿದ್ದಾರೆ. ಕಾಂಗ್ರೆಸ್ ಈ ಬಾರಿ ಮೇಲುಗೈ ಸಾಧಿಸಿದೆ.
ಗದಗ ಜಿಲ್ಲೆಯ 3-ಪುರಸಭೆ ಹಾಗೂ 3 ಪಟ್ಟಣ ಪಂಚಾಯತಿ ಸೇರಿ ಒಟ್ಟು 6 ಸ್ಥಳೀಯ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಅಧಿಕಾರ ಬಹುತೇಕ ಕೈ ವಶವಾಗಿದೆ.
ಒಂದು ಪುರಸಭೆ ಹಾಗೂ 2 ಪಟ್ಟಣ ಪಂಚಾಯತಿಯಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮೆರೆದಿದೆ. ಇನ್ನು 1-ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಬಿಜೆಪಿ ಜಯಗಳಿಸಿದೆ. ಒಂದು ಪುರಸಭೆಯಲ್ಲಿ ಮಾತ್ರ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ಪೈಕಿ ರೋಣ ಪುರಸಭೆ, ನರೇಗಲ್ ಪ.ಪಂ ಬಿಜೆಪಿ ತೆಕ್ಕೆಗೆ ಹೋದ್ರೆ, ರೋಣ ಪುರಸಭೆ, ಮುಳಗುಂದ ಪ.ಪಂ, ಶಿರಹಟ್ಟಿ ಪ.ಪಂ ಕಾಂಗ್ರೆಸ್ ತೆಕ್ಕೆಗೆ ಬಿದ್ದಿವೆ. ಆದ್ರೆ ಲಕ್ಷ್ಮೇಶ್ವರ ಪುರಸಭೆಯಲ್ಲಿ ಮಾತ್ರ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.