ಕಮಲದತ್ತ ಹಿರಿಯ ನಟ ಮಾಜಿ ಸಚಿವ ಅಂಬರೀಶ್ ಚಿತ್ತ?

ಗುರುವಾರ, 24 ನವೆಂಬರ್ 2016 (17:10 IST)
ಸಚಿವ ಸ್ಥಾನದಿಂದ ಕೈ ಬಿಟ್ಟಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವರದಿಗಳು ಹರಿದಾಡುತ್ತಿರುವುದು ಅಚ್ಚರಿ ಮೂಡಿಸಿವೆ.
 
ಅಂಬರೀಶ್ ಮತ್ತು ಅವರ ಧರ್ಮಪತ್ನಿ ಸುಮಲತಾ ಅಂಬರೀಶ್ ಕೂಡಾ ರಾಜಕೀಯ ಪ್ರವೇಶಿಸಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವ ವದಂತಿಗಳು ಕಾಂಗ್ರೆಸ್ ಪಕ್ಷವನ್ನು ಆತಂಕಕ್ಕೀಡು ಮಾಡಿವೆ.
 
ಎಲ್ಲಾ ಪಕ್ಷಗಳಲ್ಲಿ ನನಗೆ ಗೆಳೆಯರಿದ್ದು, ಯಾವ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎನ್ನುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಮಾಜಿ ಸಚಿವ ಅಂಬರೀಶ್ ತಿಳಿಸಿದ್ದಾರೆ. ಮುಂಬರುವ ಚುನಾವಣೆ ತುಂಬಾ ದೂರವಿದ್ದು ಅದರ ಬಗ್ಗೆ ಸದ್ಯಕ್ಕೆ ಚರ್ಚೆ ಬೇಡ ಎಂದು ಅಂಬರೀಶ್ ಆತ್ಮಿಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ