ರಾಜ್ಯ ಸಚಿವ ಸಂಪುಟ ಪುನಾರಚನೆಯಲ್ಲಿ ತಮ್ಮ ಹೆಸರು ಕೈಬಿಟ್ಟಿರುವುದರಿಂದ ತೀವ್ರವಾಗಿ ಅಸಮಾಧಾನಗೊಂಡಿದ ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್, ಕೆಲ ದಿನಗಳಿಂದ ರಾಜಕೀಯ ಚಟುವಟಿಕೆಯಿಂದ ದೂರ ಉಳಿದಿದ್ದರು. ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಶ್ವತವಾಗಿ ರಾಜಕೀಯದಿಂದ ದೂರು ಉಳಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.