ಬಜೆಟ್ ಮಂಡಿಸುವಲ್ಲಿ ಕಾಂಗ್ರೆಸ್ ಫೇಮಸ್. ಆದ್ರೆ, ಯೋಜನೆ ಅನುಷ್ಠಾನ ಬೋಗಸ್: ಈಶ್ವರಪ್ಪ ಲೇವಡಿ

ಶನಿವಾರ, 22 ಅಕ್ಟೋಬರ್ 2016 (15:07 IST)
ಬಜೆಟ್ ಮಂಡಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಫೇಮಸ್. ಆದರೆ, ಯೋಜನೆಗಳನ್ನು ಅನುಷ್ಠಾನಕ್ಕೆ ತರುವುದು ಮಾತ್ರ ಬೋಗಸ್ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ರಾಜ್ಯ ಸರಕಾರಕ್ಕೆ ಚಾಟಿ ಬೀಸಿದ್ದಾರೆ.
 
ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಅತೃಪ್ತ ಶಾಸಕರು ಬಿಜೆಪಿ ಸಿದ್ಧಾಂತ ಮೆಚ್ಚಿ ಬರುವುದಾದರೆ ಸ್ವಾಗತ. ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ವೈಯಕ್ತಿಕ ಆಸಕ್ತಿ ತೋರಿ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಹೇಳಿದರು.
 
ಸಾಕಷ್ಟು ವಿರೋಧಗಳ ನಡುವೆ 1800 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯ ಸರಕಾರ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡುತ್ತಿದೆ. ಸ್ಟೀಲ್ ಬ್ರಿಡ್ಜ್ ಕಾಮಗಾರಿ ಹೆಸರಿನಲ್ಲಿ ರಾಜ್ಯ ಸರಕಾರ ಲೂಟಿ ಮಾಡಲು ಹೊರಟಿದೆ ಎಂದು ಆರೋಪಿಸಿದರು. 
 
ರಾಯಣ್ಣ ಬ್ರಿಗೇಡ್ ಮುಂದುವರೆಯಲಿದೆ......
 
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ರಾಜ್ಯದ ಜನತೆ ವ್ಯಾಪಕವಾಗಿ ಬೆಂಬಲ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಬ್ರಿಗೇಡ್ ನಿಲ್ಲಲ್ಲ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಚರ್ಚಿಸಿದ್ದೇನೆ. ರಾಜಕೀಯ ರಹಿತ ಬ್ರಿಗೇಡ್‌ ಬೆಂಬಲಿಸುವುದಾಗಿ ಬಿಎಸ್‌ವೈ ಭರವಸೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ