ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಧಿಕಾರಕ್ಕೇರಿರುವ ಕಾಂಗ್ರೆಸ್, ಇದೀಗ ಮುಂಬರುವ ಲೋಕಸಭಾ ಚುನಾವಣಾ ಅಖಾಡಕ್ಕೆ ಸಜ್ಜಾಗುತ್ತಿದೆ.
ಕರ್ನಾಟಕದ ಒಟ್ಟು 28 ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿ 10ರಿಂದ 15 ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿದೆ. ಹೀಗಾಗಿ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇನ್ನು ಹೈಕಮಾಂಡ್ ಸಹ ರಾಜ್ಯ ನಾಯಕರನ್ನು ಚುನಾವಣೆಗೆ ಸಜ್ಜುಗೊಳಿಸುತ್ತಿದೆ. ಈ ಬಗ್ಗೆ ತಂತ್ರಗಾರಿಕೆ ಕುರಿತು ಚರ್ಚಿಸಲು ಹೈಕಮಾಂಡ್, ರಾಜ್ಯ ಕಾಂಗ್ರೆಸ್ನ ಪ್ರಮುಖ ನಾಯರಕರನ್ನು ನಾಳೆ ದೆಹಲಿಗೆ ಬರುವಂತೆ ಹೇಳಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ದೆಹಲಿ ತೆರಳಲಿದ್ದು, ನಾಳೆ (ಆಗಸ್ಟ್ 02) ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇನ್ನು ಈ ಸಭೆಗೆ ಮಾಜಿ ಸಿಎಂ, ಜಗದಿಶ್ ಶೆಟ್ಟರ್ ಅವರನ್ನು ಆಹ್ವಾನ ಕೊಟ್ಟಿರುವುದು ತೀವ್ರ ಕುತೂಹಲ ಮೂಡಿಸಿದೆ.