ಕಾಂಗ್ರೆಸ್‌ಗೆ ಜಿ.ಪಂ.ತಾ.ಪಂ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳು: ಕಾಂಗ್ರೆಸ್

ಶನಿವಾರ, 20 ಫೆಬ್ರವರಿ 2016 (15:48 IST)
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗೆ ಎರಡನೇ ಹಂತದ ಮತದಾನ ಇಂದು ಮುಕ್ತಾಯಗೊಳ್ಳಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚಿನ ಸ್ಥಾನಗಳು ಲಭ್ಯವಾಗಲಿವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಜನಪರ ಯೋಜನೆಗಳಿಗೆ ಹೆಚ್ಚಿನ ಒತ್ತು ಕೊಟ್ಟಿರುವುದು ಮತ್ತು ಪಾರದರ್ಶಕ ಅಡಳಿತ ನೀಡಿರುವುದರಿಂದ ಜನತೆ ಕಾಂಗ್ರೆಸ್ ಪರ ವಾಲಿದ್ದಾರೆ ಎಂದರು.
 
ರಾಜ್ಯದಲ್ಲಿ ಅತಿ ಹೆಚ್ಚಿನ ಜಿ.ಪಂ ಮತ್ತು ತಾ.ಪಂಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಣೆ ಮಾಡುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ಯಾವುದೇ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಿಲ್ಲ. ಬಡವರ , ಜನಸಾಮಾನ್ಯರ ಏಳಿಗೆಯನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೊಗಳಿದರು.

ವೆಬ್ದುನಿಯಾವನ್ನು ಓದಿ