ಕಾಂಗ್ರೆಸ್ ಸರ್ಕಾರ ಶೀಘ್ರವೇ ಅಕ್ರಮದ ಬಗ್ಗೆ ತನಿಖೆ ಮಾಡುತ್ತೆ : ಗೃಹ ಸಚಿವ
545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ಕಾರಣದಿಂದ ಹಿಂದಿನ ಬಿಜೆಪಿ ಸರ್ಕಾರ ನೇಮಕಾತಿ ರದ್ದುಗೊಳಿಸಿತ್ತು...ಈಗ ನೂತನ ಕಾಂಗ್ರೆಸ್ ಸರ್ಕಾರ ಶೀಘ್ರವೇ ಅಕ್ರಮದ ಬಗ್ಗೆ ತನಿಖೆ ಕೈಗೊಂಡು, ಹೊಸ ನೇಮಕಾತಿಗೆ ಆದೇಶ ಹೊರಡಿಸುವಂತ ಸುಳಿವು ನೀಡಿದೆ.ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ತನಿಖೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಆ ಬಳಿಕ ಹೊಸ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದರು.ಪಿಎಸ್‌ಐ ನೇಮಕಾತಿ ಅಕ್ರಮ ವಿಚಾರ ಹೈಕೋರ್ಟ್ ನಲ್ಲಿದೆ. ನೇಮಕಾತಿಗೂ ಹೈಕೋರ್ಟ್ ತಡೆ ಇದೆ. ಈ ಸಂಬಂಧ ತಾರ್ಕಿಕ ಮತ್ತು ಕಾನೂನಾತ್ಮಕ ಅವಕಾಶಗಳ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು..ಯಾವುದೇ ಅಭ್ಯರ್ಥಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತ ರೀತಿಯಲ್ಲಿ ಪಿಎಸ್‌ಐ ನೇಮಕಾತಿ ಸಂಬಂಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ...ಅಂದಹಾಗೇ ಹೈಕೋರ್ಟ್ ನಲ್ಲಿ ಪಿಎಸ್‌ಐ ಹಗರಣದ ತನಿಖೆಗೆ ತಡೆಯಾಜ್ಞೆಯಿದೆ. ಆ ತಡೆಯಾಜ್ಞೆ ತೆರವುಗೊಳಿಸಲು ಈಗ ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಈ ಸಂಬಂಧ ಎಜೆ ಶಶಿಕಿರಣ್ ಶೆಟ್ಟಿ ಜೊತೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಸೋಮವಾರ ಮತ್ತೊಮ್ಮೆ ಎಜೆ ಜೊತೆಗೆ ಚರ್ಚಿಸಲಿದ್ದಾರೆ ಎಂದ್ರು