ಆಹ್ವಾನ ನೀಡಿ ಶೆಟ್ಟರ್‌ಗೆ ಗಾಳ ಹಾಕಿದ ಕಾಂಗ್ರೆಸ್

ಭಾನುವಾರ, 16 ಏಪ್ರಿಲ್ 2023 (07:13 IST)
ಬೆಂಗಳೂರು : ಬಿಜೆಪಿಗೆ ಗುಡ್ಬೈ ಹೇಳಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಾರಾ ಅಥವಾ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
 
ಹೌದು, ಬಿಜೆಪಿ ವಿರುದ್ಧ ಬಂಡಾಯ ಸಾರಿದ ಶೆಟ್ಟರ್ ಅವರಿಗೆ ಕಾಂಗ್ರೆಸ್ ಗಾಳ ಹಾಕಿದೆ. ಸಂಬಂಧದಲ್ಲಿ ಬೀಗರಾಗಬೇಕಾದ ಶಾಮನೂರು ಶಿವಶಂಕರಪ್ಪ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಲು ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ಈಗಾಗಲೇ ಶೆಟ್ಟರ್ ಜೊತೆಗೆ ಕಾಂಗ್ರೆಸ್ ನಾಯಕರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್ ಪಕ್ಷ ಸೇರಲು ಶೆಟ್ಟರ್ ಮುಂದಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. 

ಕಾಂಗ್ರೆಸ್ ಮೂರು ಪಟ್ಟಿಯನ್ನು ರಿಲೀಸ್ ಮಾಡಿದರೂ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರಕ್ಕೆ ಇಲ್ಲಿಯವರೆಗೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಹೀಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಆಫರ್ ನೀಡಿದೆ. ಇದರ ಜೊತೆಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡದದಿಂದ ಟಿಕೆಟ್ ನೀಡುವ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ