ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದ ವಿಚಾರಕ್ಕೆ ಹೈಕಮಾಂಡ್ ಗರಂ

Krishnaveni K

ಬುಧವಾರ, 25 ಡಿಸೆಂಬರ್ 2024 (10:15 IST)
ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಸಿಟಿ ರವಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ವಾಕ್ಸಮರದ ವಿಚಾರ ಹೈಕಮಾಂಡ್ ಗೆ ತಲುಪಿದೆ. ರಾಹುಲ್ ಗಾಂಧಿ ಡ್ರಗ್ ಅಡಿಕ್ಸ್ ಎಂದ ವಿಚಾರವನ್ನು ಹೈಕಮಾಂಡ್ ಗೆ ತಲುಪಿಸಲಾಗಿದೆ.

ಮೊನ್ನೆಯಷ್ಟೇ ಬೆಳಗಾವಿ ಅಧಿವೇಶನದಲ್ಲಿ ಸಿಟಿ ರವಿಯವರು ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಕ್ಟ್ ಎಂದಿದ್ದು ಲಕ್ಷ್ಮೀ ಹೆಬ್ಬಾಳ್ಕರ್ ರನ್ಜು ಕೆರಳಿಸಿತ್ತು. ಇದಕ್ಕಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಕೊಲೆಗಾರ ಎಂದು ಸಿಟಿ ರವಿ ಹೇಳಿದ್ದರು. ಈ ವಿಚಾರವಾಗಿ ನಡೆದ ಗಲಾಟೆಗಳ ಬಗ್ಗೆ ತಕ್ಷಣವೇ ಹೈಕಮಾಂಡ್ ಗೆ ಕಾಂಗ್ರೆಸ್ ನಾಯಕರು ಮಾಹಿತಿ ನೀಡಿದ್ದರು.

ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಗೆ ವರದಿ ನೀಡಲಾಗಿತ್ತು. ಕೆಸಿ ವೇಣುಗೋಪಾಲ್ ಈ ವಿಚಾರವನ್ನು ತಕ್ಷಣವೇ ರಾಹುಲ್ ಗಾಂಧಿಗೆ ಹೇಳಿದ್ದು ತಮ್ಮನ್ನು ಡ್ರಗ್ ಅಡಿಕ್ಟ್ ಎಂದಿರುವುದಕ್ಕೆ ಅವರೂ ಆಕ್ರೋಶಗೊಂಡಿದ್ದಾರೆ ಎನ್ನಲಾಗಿದೆ.

ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕೆಸಿ ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ರಾಹುಲ್ ಹೆಸರು ಬಳಸದಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಕೈ ನಾಯಕರ ವರ್ತನೆ ಹೈಕಮಾಂಡ್ ಅಸಮಾಧಾನಕ್ಕೆ ಗುರಿಯಾಗಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ