ಬಿಬಿಎಂಪಿ ಚುನಾವಣೆ: ಕಾಂಗ್ರೆಸ್ ಪಕ್ಷದಿಂದ ವಾಮಮಾರ್ಗ ಯತ್ನ ಎಂದ ಬಿಜೆಪಿ
ಗುರುವಾರ, 15 ಸೆಪ್ಟಂಬರ್ 2016 (12:41 IST)
ವಾಮಮಾರ್ಗದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಅಧಿಕಾರ ಸ್ಥಾಪಿಸಲು, ರಾಜ್ಯ ಸರಕಾರ ತನ್ನೆಲ್ಲಾ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಮಾಜಿ ಕಾರ್ಪೊರೇಟರ್ ಹಾಗೂ ಬಿಜೆಪಿ ನಾಯಕ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.
ಪಾಲಿಕೆಯ ಆಯುಕ್ತರು ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೇರಿ ವಿವಿಧ ಜಿಲ್ಲೆ ಹಾಗೂ ರಾಜ್ಯಗಳ ರಾಜ್ಯಸಭಾ ಹಾಗೂ ವಿಧಾನ ಪರಿಷತ್ ಸದಸ್ಯರ ಹೆಸರುಗಳನ್ನು ಕಾನೂನು ಬಾಹಿರವಾಗಿ ಪಾಲಿಕೆ ವ್ಯಾಪ್ತಿಯ ವಿಳಾಸಗಳಲ್ಲಿ ಸೇರಿಸಿದ್ದಾರೆ. ಯಾವುದೇ ಅಡಿ ತಡೆಗಳಿಲ್ಲದಿದ್ದರು ಸಹ ಮಹಾಪೌರರ ಚುನಾವಣೆಯನ್ನು ವಿನಾಕಾರಣ ಮುಂದೂಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.
ಈ ಮೂಲಕ ಕಾಂಗ್ರೆಸ್ ಪಕ್ಷ ಕಾನೂನು ಬಾಹಿರವಾಗಿ ತನ್ನ ಪರವಾದ ಮತದಾರರ ಪಟ್ಟಿಯನ್ನು ಹಿಗ್ಗಿಸಿಕೊಳ್ಳುತ್ತಿದೆ. ಇದ್ದಕ್ಕೆ ಪ್ರಾದೇಶಿಕ ಆಯುಕ್ತರಾಗಿರುವ ಜಯಂತಿ ಅವರು ಸಹಾಯ ಮಾಡುತ್ತಿದ್ದಾರೆ ಎಂದು ಮಾಜಿ ಕಾರ್ಪೊರೇಟರ್ ಹಾಗೂ ಬಿಜೆಪಿ ನಾಯಕ ಎನ್.ಆರ್.ರಮೇಶ್ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ