ಕಾಂಗ್ರೆಸ್ ಮುಳುಗುತ್ತಿರುವ ಹಡಗು : ಯಡಿಯೂರಪ್ಪ
ಲಿಂಗಾಯತ ಸಿಎಂ ಭ್ರಷ್ಟ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತು ಈ ರೀತಿ ಮಾತನಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ.
ಅವರು ಬಹಳ ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ತಕ್ಕ ಉತ್ತರವನ್ನು ಈ ಸಮಾಜದವರು ಕೊಡುತ್ತಾರೆ ಎಂದರು. ಬಿಎಲ್ ಸಂತೋಷ್ ನಮ್ಮ ಪಕ್ಷದ ಹಿರಿಯ ಮುಖಂಡರು. ಪಕ್ಷದ ಸಂಘಟನೆಗಾಗಿ ಹಗಲು ರಾತ್ರಿ ದುಡುಯುತ್ತಿದ್ದಾರೆ.