ಬಿಜೆಪಿಯಿಂದ ಅನ್ಯಾಯ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ- ಬಿ ಬಿ.ವೈ.ವಿಜಯೇಂದ್ರ

geetha

ಮಂಗಳವಾರ, 5 ಮಾರ್ಚ್ 2024 (16:00 IST)
ಬೆಳಗಾವಿ : ರೈತರಿಗೆ ನೀಡಲು ಹಣವಿಲ್ಲದಿದ್ದರು ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ನೆರವು ಘೋಷಿು ವ ಮೂಲಕ ಸಿಎಂ ತುಷ್ಟೀಕರಣ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.ರಾಜ್ಯ ಕಾಂಗ್ರೆಸ್‌ ಸರ್ಕಾರವು ಕುಂತಲ್ಲಿ ನಿಂತಲ್ಲಿ ನಮಗೆ ಕೇಂದ್ರ ಬಿಜೆಪಿ  ಸರ್ಕಾರದಿಂದ ಅನ್ಯಾಯವಾಗಿದೆ ಎಂದು ಸುಳ್ಳು ಆರೋಪ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
 
 ಮಂಗಳವಾರ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಬೂತ್‌ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯುಪಿಎ ಸರ್ಕಾರದ ಹತ್ತು ವರ್ಷದ ಅವಧಿಯಲ್ಲಿ ಕರ್ನಾಟಕಕ್ಕೆ 65 ಸಾವಿರ ಕೋಟಿ ರೂ. ನೀಡಿದ್ದರೆ, ಪ್ರಧಾನಿ ನರೇಂದ್ರ ಮೋದಿ  ಅವಧಿಯಲ್ಲಿ 2.85 ಲಕ್ಷ ಕೋಟಿ ರೂ. ನೀಡಲಾಗಿದೆ ಎಂದರು.

ರಾಜ್ಯದಲ್ಲಿ 1800 ಕಿಮೀ ರೈಲ್ವೇ ಮಾರ್ಗ ನಿರ್ಮಾಣವಾಗುತ್ತಿದೆ. 15 ಸಾವಿರ ಕೋಟಿ ರೂ. ಹಣವನ್ನು ಇದಕ್ಕೆ ಮೀಸಲಾಗಿಡಲಾಗಿದೆ. ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರಾಜ್ಯದ 50 ಲಕ್ಷ ರೈತರು ಲಾಭ ಪಡೆದಿದ್ದಾರೆ. ಆದರೆ ಕರ್ನಾಟಕದ ರಾಜ್ಯ ಸರ್ಕಾರ ಬಡವರ ವಿರೋಧಿಯಾಗಿ, ರೈತರ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದಷ್ಟೇ ಅಲ್ಲ ದಲಿತ ವಿರೋಧಿ, ಮಹಿಳೆಯರ ವಿರೋಧಿ, ಯುವಜನರ ವಿರೋಧಿಯಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
 
ಕಳೆದ ಒಂಬತ್ತು ತಿಂಗಳಲ್ಲಿ ಯಾವುದೇ ಹೊಸ ಜನರಪ ಯೋಜನೆ ಘೋಷಿಸದೇ ಕಾಂಗ್ರೆಸ್‌ ನೂತನ ದಾಖಲೆ ನಿರ್ಮಿಸಿದೆ. ದುಷ್ಟ ಕಾಂಗ್ರೆಸ್‌ ಸರ್ಕಾರವು ಇದುವರೆಗೂ ಭ್ರಷ್ಟಾಚಾರ ಲೂಟಿ ಬಿಟ್ಟು ಬೇರೇನೂ ಮಾಡಿಲ್ಲ ಎಂದು ಬಿವೈವಿ ಕಿಡಿಕಾರಿದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಸ್ಥಳೀಯ ನಾಯಕರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ