ಸಾಮರಸ್ಯ ಕಾಂಗ್ರೆಸ್ ಗುರಿ, ಪ್ರಚೋದನೆ ಬಿಜೆಪಿ ಗುರಿ: ಸಚಿವ ಅಂಜನೇಯ

ಶುಕ್ರವಾರ, 26 ಆಗಸ್ಟ್ 2016 (17:44 IST)
ಎಲ್ಲ ಧರ್ಮವನ್ನು ಒಗ್ಗೂಡಿಸುವ ಮೂಲಕ ಸಾಮರಸ್ಯ ಬೆಸೆಯುವಂತಹ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಆದರೆ, ಧರ್ಮದ ಹೆಸರಲ್ಲಿ ಸಾರ್ವಜನಿಕರನ್ನು ಪ್ರಚೋದಿಸುವ ಮೂಲಕ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಆಂಜನೇಯ ಆರೋಪಿಸಿದ್ದಾರೆ.
 
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಅದೇ ರೀತಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ತಮ್ಮ ಅನಿಸಿಕೆಯನ್ನು ಹೇಳಿಕೊಂಡಿದ್ದಾರೆ. ಅವರ ಹೇಳಿಕೆಯಲ್ಲಿ ತಪ್ಪೇನಿಲ್ಲ ಎಂದು ರಮ್ಯ ಪಾಕ್ ಪರ ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡರು.
 
ಜಾತಿ ಗಣತಿ ವರದಿ ಎಲ್ಲಿಯೂ ಸೋರಿಕೆಯಾಗಿಲ್ಲ. ಅದು ಗೌಪ್ಯವಾಗಿದೆ. ಮಾಧ್ಯಮಗಳು ತಮ್ಮ ಸಂಪನ್ಮೂಲಗಳನ್ನು ಆಧರಿಸಿ ವರದಿ ಮಾಡುತ್ತಿವೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಆಂಜನೇಯ ತಿರುಗೇಟು ನೀಡಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ