ಹೆಸರಿನಲ್ಲಿ ರಾಮನಿದ್ದಾನೆ ಎಂದೇ ರಾಮನಗರ ಹೆಸರಿಗೆ ಕತ್ತರಿ ಹಾಕ್ತಿದೆಯಂತೆ ಕಾಂಗ್ರೆಸ್ ಸರ್ಕಾರ

Krishnaveni K

ಬುಧವಾರ, 10 ಜುಲೈ 2024 (11:23 IST)
ಬೆಂಗಳೂರು: ರಾಮನಗರ ಜಿಲ್ಲೆಯನ್ನು ಶೀಘ್ರವೇ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮುಗಿಬಿದ್ದಿವೆ.

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಕುರಿತಂತೆ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಕಾಂಗ್ರೆಸ್ ನವರಿಗೆ ರಾಮನನ್ನು ಕಂಡರೆ ಆಗಲ್ಲ. ಅದಕ್ಕೇ ರಾಮನಗರ ಹೆಸರು ಬದಲಾವಣೆ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಕೇಂದ್ರ ಸಚಿವ,ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಕೂಡಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಗ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಬಹುದು. ಆದರೆ ನನ್ನ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಮತ್ತೆ ತಕ್ಷಣದಿಂದಲೇ ಈಗಿನ ಹೆಸರನ್ನು ಕಿತ್ತೆಸೆಯುವುದಾಗಿ ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಡಿಕೆ ಶಿವಕುಮಾರ್ ರಾಮನಗರ ಜಿಲ್ಲೆ ಹೆಸರು ಬದಲಾವಣೆ ದಾಳ ಉರುಳಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ