ಕಾಂಗ್ರೆಸ್ ಅತೃಪ್ತರತ್ತ ಸಿಎಂ ಚಿತ್ತ

ಬುಧವಾರ, 6 ಮಾರ್ಚ್ 2019 (18:03 IST)
ಉಮೇಶ್ ಜಾಧವ ಕಾಂಗ್ರೆಸ್ ಗೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಜಾಗೃತರಾಗಿರುವ ಸಿಎಂ, ಕೈ ಪಾಳೆಯದ ಅತೃಪ್ತ ಶಾಸಕರನ್ನು ಮನವೊಲಿಸಲು ಮುಂದಾಗಿದ್ದಾರೆ.

ಬೆಂಗಳೂರಿನ ಸೆವೆನ್ ಮಿನಿಸ್ಟರ್ಸ್ ಕ್ವಾಟರ್ಸ್ ನಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ ಮಾತುಕತೆ ನಡೆಸಿರುವುದು ಚರ್ಚೆಗೆ ಕಾರಣವಾಗಿದೆ.

ಅತೃಪ್ತರನ್ನು ಕಾಂಗ್ರೆಸ್ ಪಕ್ಷದಲ್ಲಿ ಉಳಿಸಿಕೊಳ್ಳಲು ಯತ್ನ ನಡೆಸಿಲ್ಲ. ಅಲ್ಲದೇ ಪಕ್ಷದ ನಾಯಕರು ಸ್ಪೀಕರ್ ಗೆ ಅನರ್ಹತೆ ಬಗ್ಗೆ ಪತ್ರ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಪ್ರವೇಶ ಮಾಡಿದ್ದಾರೆ.

ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಉಮೇಶ ಜಾಧವ ಬಿಜೆಪಿ ಸೇರ್ಪಡೆಗೊಂಡಿರುವುದು ಮೈತ್ರಿ ಸರಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮತ್ತೊಂದೆಡೆ ಸ್ಪೀಕರ್ ನಡೆ ಕೂಡ ರಾಜಕೀಯ ಲೆಕ್ಕಾಚಾರಕ್ಕೆ ಕಾರಣವಾಗುತ್ತಿದೆ.ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ