ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹೊಸತಲ್ಲ: ಸತೀಶ್ ಜಾರಕಿಹೊಳಿ

ಶನಿವಾರ, 29 ಆಗಸ್ಟ್ 2015 (16:49 IST)
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹೊಸತಲ್ಲ ಹಿಂದೆ ಕೂಡಾ ಇಂತಹ ಮೈತ್ರಿಯಾಗಿದೆ.ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಮೈತ್ರಿ ಮಾಡಿಕೊಳ್ಳುತ್ತಿರಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 
 
ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯದಲ್ಲಿ ಯಾರು ಅಸ್ಪೃಶ್ಯರಲ್ಲ. ಹಿಂದೆ ಕೂಡಾ ಇಂತಹ ಮೈತ್ರಿಗಳಾಗಿವೆ ಎಂದರು.
 
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಆ ತೀರ್ಮಾನಕ್ಕೆ ಕಾಂಗ್ರೆಸ್ ಮುಖಂಡರು ಬದ್ಧರಾಗಿದ್ದಾರೆ. ಮುಂಬರುವ ಬೆಳವಣಿಗೆಗಳು ಕಾದು ನೋಡಿ ಎಂದು ಹೇಳಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ.ಅದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕುರಿತಂತೆ ಹೆಚ್ಚಿನ ಮಾಹಿತಿಗಳು ನನಗೆ ತಿಳಿದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ