ಉಪಚುನಾವಣೆ ಬಳಿಕ ಮತ್ತೆ ಕಾಂಗ್ರೆಸ್ –ಜೆಡಿಎಸ್ ಮೈತ್ರಿ; ಸುಳಿವು ಬಿಟ್ಟುಕೊಟ್ಟ ಕೈ ನಾಯಕ

ಭಾನುವಾರ, 1 ಡಿಸೆಂಬರ್ 2019 (07:05 IST)
ಹುಬ್ಬಳ್ಳಿ : ರಾಜ್ಯದಲ್ಲಿ ಉಪಚುನಾವಣೆಯ ಸಮರ  ಜೋರಾಗಿ ನಡೆಯುತ್ತಿದ್ದು, ಈ ನಡುವೆ ಕಾಂಗ್ರೆಸ್ ನಾಯಕರೊಬ್ಬರು ಜೆಡಿಎಸ್ ಜೊತೆಗೆ ಮತ್ತೆ ಮೈತ್ರಿ ಸರ್ಕಾರ ರಚಿಸುವ ಸುಳಿವನ್ನು ಬಹಿರಂಗಪಡಿಸಿದ್ದಾರೆ.



ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ , ಉಪಚುನಾವಣೆಯಲ್ಲಿ ಕಾಂಗ್ರೆಸ್ 10 ಕ್ಷೇತ್ರಗಳಲ್ಲಿ ಗೆಲ್ಲುವ ಭರವಸೆ ಇದೆ. ಚುನಾವಣೆಯ ನಂತರ ಕಾಂಗ್ರೆಸ್ ಜೊತೆ ಜೆಡಿಎಸ್ ಮತ್ತೆ ಕೈಜೋಡಿಸಿದರೆ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮೈತ್ರಿ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರ ಬಳಿ ಚರ್ಚೆಯಾಗಿದೆ, ಈ ಬಗ್ಗೆ ಅವರು ಒಲವು ತೋರಿಸಿದ್ದಾರೆ, ನಮ್ಮ ಹೈಕಮಾಂಡ್ ಒಪ್ಪಿಕೊಂಡರೆ ನಾವು ಸಿದ್ದ ಎಂದು ಹೇಳಿದ್ದಾರೆ.

 

ಹಾಗೇ ಕರ್ನಾಟಕದಲ್ಲಿ ಬಿಜೆಪಿಯವರು ಕುದುರೆ ವ್ಯಾಪಾರ ನಡೆಸುತ್ತಿದ್ದಾರೆ. ಮೈತ್ರಿ ಸರ್ಕಾರವನ್ನು ಕೆಡವಿ ಅಪವಿತ್ರ ಸರ್ಕಾರ ರಚಿಸಿದರು. ಈಗ ಕಾಂಗ್ರೆಸ್ ಶಾಸಕರನ್ನು ತಮ್ಮತ್ತ ಸೆಳೆದು ಚುನಾವಣೆ ಎದುರಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ