ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಪತನ ಸನ್ನಿಹಿತ: ಬಿಜೆಪಿ ಶಾಸಕ
ಗುರುವಾರ, 29 ನವೆಂಬರ್ 2018 (18:58 IST)
ಕಾಂಗ್ರೆಸ್ – ಜೆಡಿಎಸ್ ನೇತೃತ್ವದ ರಾಜ್ಯದ ಸಮ್ಮಿಶ್ರ ಸರ್ಕಾರ ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ. ಸರ್ಕಾರದ ಪತನ ನಿಶ್ಚಿತ ಎಂದು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಹೇಳಿದ್ದಾರೆ.
ಬಿಜೆಪಿ ಕಛೇರಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಯಾವುದೂ ಅಸಾಧ್ಯವಲ್ಲ. ರಾಜಕಾರಣ ನಿಂತ ನೀರಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ಬದಲಾವಣೆ ನಿಶ್ಚಿತ ಎಂದು ಹೇಳುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ಸುಳಿವನ್ನು ನೀಡಿದರು.
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಬೆಂಬಲಿಗ ಶಾಸಕರ ಜತೆ ಬಿಜೆಪಿ ಸೇರಲಿದ್ದಾರೆ ಎಂಬ ವಂದತಿಗಳಿಗೆ ಪ್ರತಿಕ್ರಿಯಿಸಿದ ಅವರು, ಸಿದ್ಧರಾಮಯ್ಯ ಬಿಜೆಪಿಗೆ ಬರ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ ಎಂದು ಮಾರ್ಮಿಕವಾಗಿ ಹೇಳಿದರು.