ಕಾಂಗ್ರೆಸ್, ಜೆಡಿಎಸ್ ಮೈತ್ರಿ: ದೇವೇಗೌಡರನ್ನು ಭೇಟಿಯಾದ ಮಂಜುನಾಥ್ ರೆಡ್ಡಿ

ಮಂಗಳವಾರ, 23 ಆಗಸ್ಟ್ 2016 (17:44 IST)
ಬಿಬಿಎಂಪಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಸಿಕೊಂಡು ಹೋಗಲು ಬೆಂಬಲ ನೀಡುವಂತೆ ಮೇಯರ್ ಮಂಜುನಾಥ್ ರೆಡ್ಡಿಯವರು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡರು.
 
ಬೆಂಗಳೂರಿನಲ್ಲಿರುವ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ, ಸೆಪ್ಟೆಂಬರ್ 19 ರಂದು ಮೇಯರ್ ಹಾಗೂ ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ದೇವೇಗೌಡರನ್ನು ಭೇಟಿ ಮಾಡಿ, ಮನವಿ ಮಾಡಿದ್ದಾರೆ. 
 
ಬೆಂಗಳೂರು ನಗರದ ಅಭಿವೃದ್ಧಿ ದೃಷ್ಠಿಯಿಂದ ಬಿಜೆಪಿಯನ್ನು ಬಿಬಿಎಂಪಿಯಿಂದ ಹೊರಗಿಡಬೇಕು ಎಂಬ ಕಾರಣದಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ಬಿಬಿಎಂಪಿಯಲ್ಲಿ ಮೈತ್ರಿ ಮಾಡಿಕೊಂಡಿದ್ದು, ಅದರಂತೆ ಉತ್ತಮ ಆಡಳಿತವನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಮೈತ್ರಿ ಮುಂದುವರೆಸಿಕೊಂಡು ಹೋಗಲು ಅವಕಾಶ ನೀಡಿ ಎಂದು ಮೇಯರ್ ಮಂಜುನಾಥ್ ರೆಡ್ಡಿ ಅವರು ಜೆಡಿಎಸ್ ವರಿಷ್ಠ ದೇವೇಗೌಡರಲ್ಲಿ ಮನವಿ ಮಾಡಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ