ಕಾಂಗ್ರೆಸ್, ಜೆಡಿಎಸ್ ನ ಹಲವರು ನನ್ನ ಸಂಪರ್ಕದಲ್ಲಿದ್ದಾರೆ: ಬಿಎಸ್ ಯಡಿಯೂರಪ್ಪ
ಇದರ ನಡುವೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜಿ.ಪಂ. ಸದಸ್ಯ ಯೋಗೀಶ್ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ್ ಕುಲಕರ್ಣಿ ಹೆಸರು ಕೇಳಿ ಬಂದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯ ನಾಶ ಮಾಡುವ ಕೆಲಸ ನಡೆಯುತ್ತಿದೆ ಎಂದು ಆರೋಪ ಮಾಡಿದ್ದಾರೆ. ಇದರಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂದು ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.