ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ರನ್ನು ಮತ್ತೊಂದು ಅವಧಿಗೆ ಮುಂದುವರಿಸುವಂತೆ ಕಾಂಗ್ರೆಸ್ ಪಕ್ಷದ ನಾಯಕಿ, ನಟಿ ಭಾವನಾ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ಗೆ ಮನವಿ ಮಾಡಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಇಂತಹ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಬದಲಿಸುವುದು ಪಕ್ಷವನ್ನು ತೊಂದರೆಗೆ ಸಿಲುಕಿಸಬಹುದು ಎಂದು ತಿಳಿಸಿದ್ದಾರೆ.
ಪರಮೇಶ್ವರ್ ಪಕ್ಷದ ಸಾರಥಿಯಾಗಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ಬಾರಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದ್ದಾರೆ. ಅವರಿಗೆ ಮತ್ತೊಂದು ಅವಧಿಗೆ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮುಂದುವರಿಸುವುದು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದು ಎಂದರು.
ನಟಿ ಭಾವನಾ ಮನವಿಗೆ ಸ್ಪಂದಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತಂತೆ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.