ಜೆಡಿಎಸ್ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ

ಸೋಮವಾರ, 8 ಅಕ್ಟೋಬರ್ 2018 (14:34 IST)
ಮಂಡ್ಯ : ಕಾಂಗ್ರೆಸ್ –ಜೆಡಿಎಸ್ ಮಿತ್ರ ಪಕ್ಷವಾಗಿ ಆಡಳಿತ ನಡೆಸಿದರೂ ಕೂಡ ಒಳಗೊಳಗೆ ಒಬ್ಬರ ಮೇಲೆ ಒಬ್ಬರು ಕಿಡಿಕಾರುತ್ತಲೇ ಇದ್ದಾರೆ. ಅದೇರೀತಿ ಇದೀಗ  ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ 80 ಸೀಟು ಗೆದ್ದಿದ್ದರೂ ಸಿಎಂ ಹುದ್ದೆ ಬಿಟ್ಟುಕೊಟ್ಟಿದ್ದೇವೆ. ಆದರೂ ಜೆಡಿಎಸ್ ನವರಿಗೆ ಹೇಗೆ ನಡೆದುಕೊಳ್ಳಬೇಕೆಂದು ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.


ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಕುವುದಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ರಾಜ್ಯ ನಾಯಕರು ಸಹ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿಧಾನಸಭೆಗೆ ಮಾತ್ರ ಸೀಮಿತ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರೇ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.


ಹಾಗೇ ಜೆಡಿಎಸ್ ಬಲಿಷ್ಠವಾಗಿದ್ದರೂ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಇತಿಹಾಸವಿದೆ. ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಂದೆ ಅಭ್ಯರ್ಥಿ ಹಾಕಬೇಕೆಂದು ಒತ್ತಡ ಹಾಕುವೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ