ಶೀಘ್ರಧಲ್ಲಿ ಪ್ರಧಾನಿ ಮೋದಿ ಮೋಸ ದೇಶದ ಜನತೆಗೆ ಅರ್ಥವಾಗಲಿದೆ: ಪೂಜಾರಿ

ಮಂಗಳವಾರ, 14 ಮಾರ್ಚ್ 2017 (14:17 IST)
ಪ್ರಧಾನಮಂತ್ರಿ ಮೋದಿ ಮೋಸ ಮುಂಬರುವ ಚುನಾವಣೆಯ ವೇಳೆಗೆ ದೇಶದ ಜನತೆಗೆ ಅರ್ಥವಾಗಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ.
 
ನರೇಂದ್ರ ಮೋದಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಮಧ್ಯಪ್ರವೇಶಿಸುವ ಅನಿವಾರ್ಯತೆ ಎದುರಾಗಿದೆ ಎಂದು ತಿಳಿಸಿದ್ದಾರೆ.
 
ಉತ್ತರಪ್ರದೇಶ ಚುನಾವಣೆಯಲ್ಲಿನ ಅಭೂತಪೂರ್ವ ಜಯಬೇರಿಯಿಂದ ಬಿಜೆಪಿ ಆಕಾಶದಲ್ಲಿ ತೇಲಾಡುತ್ತಿದೆ. ಮುಂಬರುವ ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲು ಖಚಿತ ಎಂದು ಭವಿಷ್ಯ ನುಡಿದರು.
 
ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟದ ಸಚಿವರಿಂದ ಉಪಚುನಾವಣೆಯಲ್ಲಿ ಪಕ್ಷಕ್ಕೆ ಗೆಲುವು ದೊರಕಿಸಿಕೊಡಲು ಸಾದ್ಯವಾಗುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಮ್ಮದೇ ಪಕ್ಷದ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ